ಮಂಗಳವಾರ ದೆಹಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಮಾಡಿದ್ದಕ್ಕಾಗಿ ರೋಹಿತ್ ಶರ್ಮಾಗೆ ಬರೋಬ್ಬರಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಮುಂಬೈ ಇಂಡಿಯನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 138 ರನ್ಗಳ ಗುರಿ ನೀಡಿತ್ತು.
ಈ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 4 ವಿಕೆಟ್ ನಷ್ಟಕ್ಕೆ 138 ರನ್ಗಳನ್ನ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನ ಮಣಿಸಿದೆ.
ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಧಾನಗತಿಯಲ್ಲಿ ಆಟವನ್ನ ನಿರ್ವಹಿಸಿದ್ದಾರೆ ಎಂಬ ಕಾರಣಕ್ಕೆ ತಂಡದ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.