ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಬಿಡುತ್ತಿದ್ದು, ನಾಳೆಯಿಂದ ಸಾರಿಗೆ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದರು.
ಸರ್ಕಾರಕ್ಕೆ ಲಾಕ್ ಡೌನ್ ಮಾಡುವ ಚಿಂತನೆಯಿತ್ತು ಆದರೆ
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ ಇಂತ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ, ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಾಲಯ ಸೂಚಿಸಿದೆ. ಹಾಗಾಗಿ ನ್ಯಾಯಾಲಯಕ್ಕೆ ಗೌರವ ಕೊಟ್ಟು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ. ಆದರೆ ನಮ್ಮ ಬೇಡಿಕೆ ಆಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಇನ್ನು ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದ ನೌಕರರ ವಿರುದ್ಧ ಸರ್ಕಾರ ಕೈಗೊಂಡಿದ್ದ ಅಮಾನತು ಆದೇಶ, ವರ್ಗಾವಣೆ ಆದೇಶ, ಶೋಕಾಸ್ ನೋಟೀಸ್ ಮೊದಲಾದ ದಮನಕಾರಿ ನೀತಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.