ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ರಾಜ್ಯದಲ್ಲಿ ಬುಧವಾರದಂದು 23 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ, ಆಕ್ಸಿಜನ್ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ. ಸಕಾಲಕ್ಕೆ ಆಕ್ಸಿಜನ್ ಸಿಗದಿರುವುದರಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಾಹನ ಮಾಲೀಕರೇ ಎಚ್ಚರ: ಫುಟ್ಪಾತ್ ಮೇಲೆ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ
ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಕೊರೊನಾ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಸಲಹೆ ನೀಡಿದ್ದಾರೆ.
ಅಲ್ಲದೆ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ದೃಷ್ಟಿಯಿಂದ ಅವರುಗಳಿಗೆ ವಿಮಾ ಸೌಲಭ್ಯ ನೀಡಬೇಕು ಎಂದು ಹೇಳಿರುವ ದೇವೇಗೌಡರು, ತಂತ್ರಜ್ಞರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಮೂಲಕ ಸೋಂಕಿತರ ನೆರವಿಗೆ ಧಾವಿಸಬೇಕು ಎಂದು ಹೇಳಿದ್ದಾರೆ.