ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ಇದರ ಜೊತೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದೆ.
ಮೇ 4ರ ವರೆಗೆ ಈ ನಿರ್ಬಂಧ ಮುಂದುವರೆಯಲಿದ್ದು, ಜೊತೆಗೆ 10ನೇ ತರಗತಿ ವಿದ್ಯಾರ್ಥಿಗಳ ನೇರ ತರಗತಿಯನ್ನು ಸ್ಥಗಿತಗೊಳಿಸಿದೆ. ತರಗತಿಗಳನ್ನು ಮೇ 4 ರವರೆಗೆ ಸ್ಥಗಿತಗೊಳಿಸಿರುವುದರಿಂದ ಒಂದರಿಂದ ಹತ್ತನೇ ತರಗತಿ ಶಿಕ್ಷಕರು ಈ ಅವಧಿಯಲ್ಲಿ ಶಾಲೆಗಳಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಗ್ರಾಹಕರೇ ಗಮನಿಸಿ…! ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಅರ್ಧ ದಿನ ಮಾತ್ರ ಓಪನ್’
ಆದರೆ 10ನೇ ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಕ್ಷಕರುಗಳು ಅಂತಹ ವಿದ್ಯಾರ್ಥಿಗಳೊಂದಿಗೆ ಆನ್ಲೈನ್ ಅಥವಾ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ಅವರುಗಳ ಗೊಂದಲಗಳನ್ನು ಪರಿಹರಿಸಬೇಕು ಎಂದು ಸೂಚಿಸಲಾಗಿದೆ.