ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಜಂಬು ಸಿಲಿಂಡರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೂ ಚರ್ಚಿಸಿದ್ದು, ಈಗಾಗಲೇ ಆಕ್ಸಿಜನ್ ಉತ್ಪಾದಕರ ಜೊತೆ ಮಾತುಕತೆ ನಡೆದಿದೆ. 40,000 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜಾಗಿದೆ. 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಕೋವಿಡ್ ಆರೈಕೆ ಕೇಂದ್ರದಲ್ಲಿ ಆಘಾತಕಾರಿ ಘಟನೆ: ಸರಿಯಾಗಿ ಚಿಕಿತ್ಸೆ ನೀಡದ ನರ್ಸ್ ಗೆ ಚಾಕುವಿನಿಂದ ಇರಿದ ಸೋಂಕಿತ
ರೆಮ್ ಡಿಸಿವಿರ್ ಬಗ್ಗೆ ತಪ್ಪು ಕಲ್ಪನೆಯಿದೆ. ಅದನ್ನು ಪಡೆದರೆ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತೇವೆ ಎಂದುಕೊಂಡಿದ್ದಾರೆ. ಆದರೆ ರೆಮ್ ಡಿಸಿವಿರ್ ಗಿಂತ ಸ್ಟೆರಾಯ್ಡ್ ಉತ್ತಮವಾಗಿ ಕೆಲಸ ಮಾಡುತ್ತದೆ. ಕೆಲ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ರೆಮ್ ಡಿಸಿವಿರ್ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.