ಬೆಂಗಳೂರು: ಎರಡನೇ ಬಾರಿ ಕೊರೊನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕು ಹಿನ್ನಲೆಯಲ್ಲಿ ಏಪ್ರಿಲ್ 16ರಂದು ಸಿಎಂ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಗುಣಮುಖರಾಗಿರುವ ಮುಖ್ಯಮಂತ್ರಿಗಳಿಗೆ ಈಗ ಕೋವಿಡ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗನ ಬಂಧನ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸ್ಥಿತಿ ಕೈಮೀರುತ್ತಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಜನರು ಸರ್ಕಾರದ ನಿಯಮವನ್ನು ಪಾಲನೆ ಮಾಡಿ ಸಹಕರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಪಾಡಿ ಎಂದರು.
ಜನರು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಮನವಿ ಮಾಡಿದರು.