alex Certify ಕೊರೊನಾ ಹೊಡೆತಕ್ಕೆ ರಾಷ್ಟ್ರವೇ ತತ್ತರ; ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ನಗುಮೊಗದ ಜಾಹೀರಾತು; ಪ್ರಚಾರಪ್ರಿಯ ಸರ್ಕಾರದ ವಿರುದ್ಧ ಹೆಚ್.ಡಿ.ಕೆ. ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೊಡೆತಕ್ಕೆ ರಾಷ್ಟ್ರವೇ ತತ್ತರ; ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ನಗುಮೊಗದ ಜಾಹೀರಾತು; ಪ್ರಚಾರಪ್ರಿಯ ಸರ್ಕಾರದ ವಿರುದ್ಧ ಹೆಚ್.ಡಿ.ಕೆ. ಕಿಡಿ

ಟ್ರಂಪ್ ಭೇಟಿ : ಲೂಟಿ ಹೊಡೆಯಲು ಅವಕಾಶವಾಗಬಾರದು : ಹೆಚ್ ಡಿ ಕೆ | Prajapragathi

ಬೆಂಗಳೂರು: ರಾಜ್ಯ ಸರ್ಕಾರದ ಜಾಹೀರಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋವಿಡ್ ಸೂತಕದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ನಗುಮುಖದ ಜಾಹೀರಾತು ಜನರ ನೋವನ್ನು ಗೇಲಿ ಮಾಡುವಂತಿದೆ ಇಂತಹ ಸಂದರ್ಭದಲ್ಲಿ ಪ್ರಚಾರದ ಅಗತ್ಯವೇನಿತ್ತು ಎಂದು ಕಿಡಿಕಾರಿದ್ದಾರೆ.

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ; ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲಿಸಿ; ಜನತೆಗೆ ಸಿಎಂ ಮನವಿ

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ. ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು. ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಕಿಡಿಕಾರಿದ್ದಾರೆ.

https://www.facebook.com/watch/?v=134075395296999

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...