alex Certify ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ

ನವದೆಹಲಿ: ಖ್ಯಾತ ಸಂಗೀತ ನಿರ್ದೇಶಕ ಜೋಡಿ ನದೀಮ್-ಶ್ರವಣ್ ಅವರಲ್ಲಿ ಶ್ರವಣ್ ರಾಥೋಡ್ ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಗುರುವಾರ ಸಂಜೆ ಮುಂಬೈ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.

67 ವರ್ಷ ವಯಸ್ಸಿನ ಶ್ರವಣ್ ರಾಥೋಡ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಗಂಭೀರ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಸ್ಎಲ್ ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಗ ಸಂಜೀವ್ ರಾಥೋಡ್ ತಿಳಿಸಿದ್ದು, ಚಿಕಿತ್ಸೆ ಫಲಿಸದೆ ತಂದೆಯವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

90ರ ದಶಕದಲ್ಲಿ ಸ್ಮರಣೀಯ ಹಾಡುಗಳನ್ನು ನೀಡಿದ ನದೀಮ್-ಶ್ರವಣ್ ಜೋಡಿ ಹಲವಾರು ಗಾಯಕರನ್ನು ಪರಿಚಯಿಸಿದ್ದರು. ಗಾಯಕಿ ಶ್ರೇಯಾ ಘೋಷಾಲ್ ಸೇರಿದಂತೆ ಹಲವು ಖ್ಯಾತನಾಮರು ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...