alex Certify BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..?

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುತ್ತದೆ.

ರಾಜ್ಯದಲ್ಲಿ ಉಚಿತವಾಗಿ ಲಸಿಕೆ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಇದೆ. ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿಯವರ ಮೇಲೆ ಒತ್ತಡವಿದ್ದು, ಪ್ರತಿಪಕ್ಷಗಳಿಂದ ಕೂಡ ಒತ್ತಡ ಇದೆ. ಮೊದಲಿಗೆ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಲಸಿಕೆ ನೀಡಿ ಬಳಿಕ ಎಪಿಎಲ್ ಹಾಗೂ ಇತರರಿಗೂ ಕೂಡ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

ಸಿಎಂ ಅಧ್ಯಕ್ಷತೆಯಲ್ಲಿ ಸೋಮವಾರ ಸಂಪುಟ ಸಭೆ ನಡೆಯಲಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ಲಸಿಕೆ ನೀಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡಿ ಲಸಿಕೆ ನೀಡುತ್ತಿದ್ದು, ಆರಂಭದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ನಂತರದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬಹುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...