ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಹಾಸಿಗೆ, ಆಕ್ಸಿಜನ್ ಕುರಿತಾಗಿ ಮಾಹಿತಿ ಪಡೆದುಕೊಂಡ ಸಿಎಂ, ಆಕ್ಸಿಜನ್ ಮತ್ತು ರೆಮ್ ಡೆಸಿವಿರ್ ಕೊರತೆ ಕಂಡುಬಂದರೆ ಕೂಡಲೇ ನನ್ನ ಗಮನಕ್ಕೆ ತನ್ನಿ ಎಂದು ಸಂಬಂಧಿಸಿದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತುರ್ತು ಅಗತ್ಯ ಕಂಡುಬಂದರೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನನ್ನ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.