ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಭಾನುವಾರವಾಗಿರುವುದರಿಂದ ಅನೇಕರು ಮೀನು, ಮಾಂಸ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಲು, ಹಣ್ಣು, ತರಕಾರಿ, ಸೊಪ್ಪು ವ್ಯಾಪಾರ ಇತರೆ ಅಗತ್ಯ ವಸ್ತುಗಳ ಖರೀದಿಗೆ 10 ಗಂಟೆವರೆಗೂ ಅವಕಾಶವಿದೆ. 10 ಗಂಟೆಯ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಗತ್ಯವಾಗಿ ರಸ್ತೆಗಳಿಯುವವರಿಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ.
ಅಂದ ಹಾಗೇ, ರಾಜ್ಯದಲ್ಲಿ ದಿನ ದಿನವೂ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿರುವುದರಿಂದ ವಾರವಿಡೀ ವೀಕೆಂಡ್ ಮಾದರಿ ಕರ್ಫ್ಯೂ ಜಾರಿಗೊಳಿಸಬೇಕೆಂಬ ಸಲಹೆ ಕೇಳಿಬಂದಿದ್ದು, ನಾಳಿನ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.