ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗದವರೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರ ಸಂಖ್ಯೆ ಯಥೇಚ್ಛವಾಗಿ ಹೆಚ್ಚುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ವಾರ ಲಾಕ್ ಡೌನ್ ಘೋಷಿಸಿಸಿದ್ದು, ಇನ್ನೊಂದು ವಾರ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ನಿನ್ನೆಯೊಂದೇ ದಿನ 24,000 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಅಂದರೆ 357 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದು ದೆಹಲಿ ಜನತೆಯನ್ನು ಇನ್ನಷ್ಟು ಆತಂಕಕ್ಕೆ ತಳ್ಳುವಂತೆ ಮಾಡಿದೆ. ಕ್ಷಣ ಕ್ಷಣಕ್ಕೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಮಾಜಿ ಸಚಿವರ ಬೆಂಬಲಿಗ ಸೇರಿದಂತೆ ನಾಲ್ವರ ಅರೆಸ್ಟ್
ದೆಹಲಿಯಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ನಾಳೆ ಬೆಳಿಗ್ಗೆ 6 ಗಂಟೆಗೆ ಮುಕ್ತಾಯವಾಗಲಿದ್ದು, ಈ ಮಧ್ಯೆ ಸೋಂಕಿತರ ಸಂಖ್ಯೆ ಜೊತೆಗೆ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಕೂಡ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.