ಕೊಡಗು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಜನರು ತತ್ತರಿಸುತ್ತಿದ್ದು, ಈಗಾಗಲೇ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಇಲ್ಲದೇ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಮನೆ ಮನೆಗಳಲ್ಲೂ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ಕುಟುಂಬ ಸದಸ್ಯರೆಲ್ಲರನ್ನು ಬೆಂಬಿಡದೇ ಕಾಡುತ್ತಿದೆ.
ಈ ನಡುವೆ ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ 32 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಕರಾಳತೆಯ ಪರಿಸ್ಥಿತಿಯ ಅರಿವನ್ನು ಮೂಡಿಸುವಂತಿದೆ ಈ ಪ್ರಕರಣ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್ ಕುಟುಂಬದ 32 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.