ಬೆಂಗಳೂರು: ರಾಜ್ಯದ ಜನತೆಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇದೀಗ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತ ಲಸಿಕೆ ನೀಡಿ ಎಂದು ಆಗ್ರಹಿಸಿದ್ದಾರೆ.
ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸಬೇಕಾದ ಕೇಂದ್ರ ಸರ್ಕಾರ ಅದರ ಬೆಲೆ ಏರಿಕೆ ಮಾಡಿ ಜನರು ಲಸಿಕೆ ಪಡೆಯದಂತೆ ಮಾಡುತ್ತಿದೆ. ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿರುವ ಸರ್ಕಾರದ ನಿಷ್ಕ್ರಿಯತೆಗೆ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ; ಮಹಾರಾಷ್ಟ್ರ ಸಚಿವರಿಂದ ಮಹತ್ವದ ಘೋಷಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಔಷಧ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಮೋದಿ ಅವರನ್ನು ಬೇಡುತ್ತಿರುವುದನ್ನು ಕಂಡಾಗ ಕನಿಕರ ಮೂಡುತ್ತಿದೆ. ರಾಜ್ಯದ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕುಳಿತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ನಡೆಸಲು ಕೂರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.