ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್ ಇನ್ಸ್ಪೆಕ್ಟರ್ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್ರಾಜ್ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ.
ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯ 72 ವರ್ಷದ ತಾಯಿ ಸಾವಿಗೀಡಾಗಿದ್ದದಾರೆ. ಇದರಿಂದ ಆಕ್ರೋಶಗೊಂಡ ಜುಲ್ಫೀಕರ್ ಅಲಿ ಹಾಗೂ ಆತನ ಸಹೋದರ ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ವೈದ್ಯರು ತಡೆ ಒಡ್ಡುತ್ತಿದ್ದಂತೆಯೇ ಹಲ್ಲೆ ನಡೆಸಲಾಗಿದೆ.
ಇನ್ನು ಅಲಿ ಹಾಗೂ ಆತನ ಕುಟುಂಬಸ್ಥರು ಕೂಡ ಗಾಯಗೊಂಡಿದ್ದಾರೆ ಎಂದು ಅಲಿ ಹೇಳಿದ್ದಾರೆ. ಘಟನೆಯ ಬಳಿಕ ಕೋಪಗೊಂಡ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಸುಮಾರು 7 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ರು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಈ ಪ್ರತಿಭಟನೆ ಬಳಿಕ ಆಸ್ಪತ್ರೆ ಆಡಳಿತ ಮಂಡಳಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿ ಈ ವಿವಾದವನ್ನ ಪರಿಹರಿಸಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ ನರೇಂದ್ರ ಪ್ರಸಾದ್, ಸಿಸಿ ಫೂಟೇಜ್ ವಶಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಸಂಬಂಧ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ.