ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಇದನ್ನು ಪ್ರಶ್ನಿಸಿದ ಗಂಡನನ್ನು ಕೊಲೆ ಮಾಡಲು ಯತ್ನಿಸಿದ್ದು, ಕಾಡುಗೋಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೀಗೆಹಳ್ಳಿಯ 41 ವರ್ಷದ ಟೆಕ್ಕಿಗೆ ಆತನ ಪತ್ನಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿ ಪರಾರಿಯಾಗಿದ್ದಾಳೆ. ಟೆಕ್ಕಿ ಪತ್ನಿ ಮತ್ತು ಆಕೆಯ ಪ್ರಿಯಕರನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಇಬ್ಬರೂ ತಲೆಮರೆಸಿಕೊಂಡಿದ್ದಾರೆ.
ಟೆಕ್ಕಿ ದಂಪತಿ ಮಗನೊಂದಿಗೆ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದು, ಪತಿ ವರ್ಕ್ ಫ್ರಂ ಹೋಮ್ ಕಾರ್ಯನಿರ್ವಹಿಸುತ್ತಿದ್ದರೆ ಪತ್ನಿ ಸಾಫ್ಟ್ವೇರ್ ಕಂಪನಿಯೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಕಚೇರಿಯ ಸಹೋದ್ಯೋಗಿಯೊಂದಿಗೆ ಆಕೆಗೆ ಅಕ್ರಮ ಸಂಬಂಧ ಏಪ್ರಿಲ್ 23 ಶುಕ್ರವಾರ ತಡರಾತ್ರಿ ಗಂಡ ಆಕೆಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದು ಆಕ್ರೋಶಗೊಂಡ ಪತ್ನಿ ಪತಿಯ ಎದೆ ಮತ್ತು ಕೈಗಳಿಗೆ ಚೂರಿಯಿಂದ ಇರಿದಿದ್ದಾಳೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ಪತಿ ಮನೆಗೆ ಮರಳಿದಾಗ ಪತ್ನಿ ಪರಾರಿಯಾಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.