ದೇಶದ ಪ್ರತಿಷ್ಟಿತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 17ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ವಿಭಾಗದಲ್ಲಿ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಹ ಭಾರತೀಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯಾವುದಾದರೂ ಒಂದು ರಾಜ್ಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಎಸ್ಬಿಐ ಹೇಳಿದೆ.
5000 ಸಾಮಾನ್ಯ ಹುದ್ದೆಗಳು ಹಾಗೂ 237 ಬ್ಯಾಕ್ಲಾಗ್ ಹುದ್ದೆಗಳನ್ನ ಭರ್ತಿ ಮಾಡುವ ಇರಾದೆಯನ್ನ ಎಸ್ಬಿಐ ಹೊಂದಿದೆ. ಎರಡು ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಪ್ರಾಥಮಿಕ ಹಾಗೂ ಮುಖ್ಯ ಮತ್ತು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾಥಮಿಕ ಪರೀಕ್ಷೆಯನ್ನ ಸದ್ಯಕ್ಕೆ ಜೂನ್ ತಿಂಗಳಲ್ಲಿ ನಿಗದಿಪಡಿಸಲಾಗಿದೆ. ಏಪ್ರಿಲ್ 1ನೇ ತಾರೀಖಿಗೆ ಅನ್ವಯವಾಗುವಂತೆ 20 ರಿಂದ 28 ವರ್ಷ ಮೇಲ್ಪಟ್ಟವರು ಈ ಹುದ್ದೆಗೆ ಅರ್ಹರಾಗಿದ್ದಾರೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಮಾನ ಅರ್ಹತೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 16-08-2021ರ ಒಳಗಾಗಿ ಐಡಿಡಿ ಪ್ರಮಾಣಪತ್ರ ಹೊಂದಿದವರು ಈ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಎಸ್ಬಿಐ ಹೇಳಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳು ಪ್ರೊಬೆಷನರಿ ಅವಧಿ ಇರಲಿದೆ.