ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಎರಡು ತಿಂಗಳು ಉಚಿತವಾಗಿ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 5 ಕೆಜಿ ಪಡಿತರ ವಿತರಿಸಲಾಗುವುದು.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಿಸುವುದಾಗಿ ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.