
ಲಖ್ನೋ: ಉತ್ತರಪ್ರದೇಶದಲ್ಲಿ ಪಂಚಾಯಿತಿ ಚುನಾವಣೆಗೆ ಹೋಗಿದ್ದ 135 ಶಿಕ್ಷಕರು ಮೃತಪಟ್ಟಿದ್ದಾರೆ. ಮತದಾನದ ವೇಳೆ ನಿಯಮ ಕೋವಿಡ್ ಪಾಲಿಸದ ಆರೋಪ ಕೇಳಿಬಂದಿದೆ.
ಮಾಧ್ಯಮಗಳ ವರದಿ ಆಧರಿಸಿ ಅಲಹಾಬಾದ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ಉತ್ತರ ಪ್ರದೇಶ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಮಾಡಿದೆ. ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದೆ. ನೋಟಿಸ್ ಗೆ ಉತ್ತರ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.