alex Certify BPL ಕಾರ್ಡ್ ಹೊಂದಿದವರಿಗೆ ಉಚಿತ ಕೋವಿಡ್ ಚಿಕಿತ್ಸೆ: ಹಿರೇಕೆರೂರು ಕ್ಷೇತ್ರದ ಬಡವರಿಗೆ ಬಿ.ಸಿ. ಪಾಟೀಲ್ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಹೊಂದಿದವರಿಗೆ ಉಚಿತ ಕೋವಿಡ್ ಚಿಕಿತ್ಸೆ: ಹಿರೇಕೆರೂರು ಕ್ಷೇತ್ರದ ಬಡವರಿಗೆ ಬಿ.ಸಿ. ಪಾಟೀಲ್ ನೆರವು

ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರಾದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ.

ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದಾರೆ.

ಬಡತನರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಕೋವಿಡ್ ಚಿಕಿತ್ಸೆಗೆ ಹಾವೇರಿ ಜಿಲ್ಲೆಗೊಳಪಟ್ಟ ಆಸ್ಪತ್ರೆಗಳಿಗೆ ಮಾತ್ರ ದಾಖಲಾಗಿಬೇಕು. ಹಾಗೂ ಬಿಪಿಎಲ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು‌. ಚಿಕಿತ್ಸೆ ಪಡೆದ ವಿವರ ಮಾಹಿತಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಮನೋಜ್ ಹಾರನಹಳ್ಳಿ ಹಾಗೂ ನಾಗರಾಜ್ ಬಣಕಾರ್ ಅವರ‌ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...