ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3645 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,04,832 ಕ್ಕೆ ಏರಿಕೆಯಾಗಿದೆ.
ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ, ಲಸಿಕೆ ಮೇಲಿನ GST ಮನ್ನಾ ಸಾಧ್ಯತೆ
ಇನ್ನು ದೇಶದಲ್ಲಿ 30,84,814 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,50,86,878 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,69,507 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 17,68,190 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 28,44,71,979 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 15,00,20,648 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.