
ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಕ್ರಿಕೆಟ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಾರ್ನರ್ ಈ ಸಾಧನೆ ಮಾಡಿದ್ರು.
148 ಇನ್ನಿಂಗ್ಸ್ಗಳಲ್ಲಿ ಭಾಗಿಯಾಗಿರುವ ಡೇವಿಡ್ ವಾರ್ನರ್ 50 ಅರ್ಧ ಶತಕಗಳನ್ನ ಸಿಡಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಈ ಆಟಗಾರ ಈ ಹಿಂದೆ ಡೆಲ್ಲಿ ಡೇರ್ಡೇವಿಲ್ಸ್ (ಡೆಲ್ಲಿ ಕ್ಯಾಪಿಟಲ್)ನಲ್ಲಿ ಆಡಿದ್ದು ಇದೀಗ ಸನ್ರೈಸರ್ಸ್ ಹೈದರಾಬಾದ್ ತಂಡದ ಆಟಗಾರರಾಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ 43 ಅರ್ಧ ಶತಕಗಳ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ರಾಯಲ್ ಚಾಲೆಂಜರ್ಸ್ ತಂಡದ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ 40 ಅರ್ಧ ಶತಕಗಳ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.