ಬೆಂಗಳೂರು: ಕೊರೋನಾ ನಿಯಂತ್ರಣ ಕರ್ತವ್ಯದಲ್ಲಿ ಪಾಲ್ಗೊಂಡು ಸೋಂಕು ತಗಲಿ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಗಳಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡುವ ಪ್ರಸ್ತಾಪಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.
ಸರ್ಕಾರಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕೋವಿಡ್ ನಿಯಂತ್ರಣ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟರೆ ಅವರ ಕುಟುಂಬಗಳಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ವಿತರಿಸಲು 2020ರ ಆಗಸ್ಟ್ 7 ರಂದು ಆದೇಶ ಹೊರಡಿಸಲಾಗಿದೆ.
ಅನುದಾನಿತ ಶಾಲೆ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಇಲಾಖೆಯ ಮುಖ್ಯಸ್ಥರು, ಸಂಬಂಧಿಸಿದ ಜಿಲ್ಲಾಧಿಕಾರಿ, ಆಯುಕ್ತರು ಅನುದಾನಿತ ಶಾಲಾ ಶಿಕ್ಷಕರನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಆದೇಶದ ಪ್ರತಿ ಇದ್ದಲ್ಲಿ ಸೌಲಭ್ಯಕ್ಕೆ ಪರಿಗಣಿಸುವಂತೆ ತಿಳಿಸಲಾಗಿದೆ.