alex Certify ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿವಿಧ ಆದಾಯ ತೆರಿಗೆ ವಿವರ ಸಲ್ಲಿಕೆ ಗಡುವು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿವಿಧ ಆದಾಯ ತೆರಿಗೆ ವಿವರ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ: 2019 -20 ನೇ ಹಣಕಾಸು ವರ್ಷದ ವಿಳಂಬದ ಐಟಿಆರ್ ಸಲ್ಲಿಕೆ ಸೇರಿದಂತೆ ವಿವಿಧ ಆದಾಯ ತೆರಿಗೆ ವಿವರಗಳ ಮಾಹಿತಿಯನ್ನು ಸಲ್ಲಿಸುವ ಗಡುವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಈ ಕ್ರಮಕೈಗೊಂಡಿದೆ. ತೆರಿಗೆ ಸಲಹೆಗಾರರು ಮತ್ತು ತೆರಿಗೆದಾರರ ಮನವಿಯನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿದ್ದು, ಮಾರ್ಚ್ 31ರ ಒಳಗೆ ಪರಿಷ್ಕೃತ ಐಟಿಆರ್ ಸಲ್ಲಿಸಬೇಕಿದ್ದ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಹಣಕಾಸು ವರ್ಷದ ವಿಳಂಬಿತ ಪರಿಷ್ಕೃತ ಐಟಿಆರ್ ಸಲ್ಲಿಕೆ ಸೇರಿ ವಿವಿಧ ಆದಾಯ ತೆರಿಗೆ ಮಾಹಿತಿಗಳನ್ನು ಮೇ 31 ರೊಳಗೆ ಸಲ್ಲಿಕೆ ಮಾಡಬೇಕಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...