ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಇನ್ನೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡುವುದಾಗಿ ಶನಿವಾರ ಪ್ರಕಟಿಸಿದ್ದಾರೆ.
ಈಗ ಜಾರಿಯಲ್ಲಿರುವ ಲಾಕ್ ಡೌನ್ ಮೇ 3 ಸೋಮವಾರಕ್ಕೆ ಕೊನೆಗೊಳ್ಳಲಿದೆ. ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕೊರೋನಾ ಎರಡನೇ ಅಲೆಯಿಂದ ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಏಪ್ರಿಲ್ 19 ರಿಂದ ನಿರ್ಬಂಧ ವಿಧಿಸಲಾಗಿದೆ. ಆಕ್ಸಿಜನ್ ಕೊರತೆ ತೀವ್ರವಾಗಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಬೇಡಿಕೆಯಷ್ಟು ಆಮ್ಲಜನಕ ಪೂರೈಕೆಯಾಗ್ತಿಲ್ಲ. ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ಏರಿಕೆ ಹಿನ್ನಲೆಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.