ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡದಲ್ಲಿ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 4ರನ್ ಗಳಿಸಿ ಟ್ರೆಂಟ್ ಬೌಲ್ಟ್ ಗೆ ತಮ್ಮ ವಿಕೆಟ್ ಒಪ್ಪಿಸಿದರು ಫಾಫ್ ಡು ಪ್ಲೆಸಿಸ್ ಹಾಗೂ ಮೊಯಿನ್ ಅಲಿ ಭರ್ಜರಿ ಜೊತೆಯಾಟವಾಡಿದರು ನಂತರ ಮೊಯಿನ್ ಅಲಿ 36 ಎಸೆತಗಳಲ್ಲಿ 58ರನ್ ಗಳಿಸಿ ಜಸ್ಪ್ರಿತ್ ಬುಮ್ರಾ ಬೌಲಿಂಗ್ ನಲ್ಲಿ ಔಟಾದರೇ ಫಾಫ್ ಡು ಪ್ಲೆಸಿಸ್ 28 ಎಸೆತಗಳಲ್ಲಿ 50ರನ್ ಗಳಿಸಿದ್ದು ಕೈರನ್ ಪೊಲಾರ್ಡ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಅಂಬಟಿ ರಾಯುಡು ಕೇವಲ 27 ಎಸೆತಗಳಲ್ಲಿ 72ರನ್ ಗಳಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು ಇವರ ಈ ಸ್ಫೋಟಕ ಇನಿಂಗ್ಸ್ ನಲ್ಲಿ 7 ಸಿಕ್ಸರ್ ಹಾಗೂ 4 ಬೌಂಡರಿಗಳಿದ್ದವು. ಚೆನ್ನೈ ಸೂಪರ್‌ಕಿಂಗ್ಸ್ ಒಟ್ಟಾರೆ 4 ವಿಕೆಟ್ ನಷ್ಟಕ್ಕೆ 218ರನ್ ಗಳ ಮೊತ್ತ ದಾಖಲಿಸಿತು.
ಇಂದಿನ ಪಂದ್ಯದಲ್ಲಿ ಈ ದಾಖಲೆಗೆ ಪಾತ್ರರಾಗಲಿದ್ದಾರೆ ‘ಮಿಸ್ಟರ್ ಐಪಿಎಲ್’ ಸುರೇಶ್ ರೈನಾ
ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡದಲ್ಲಿ ನಾಯಕ ರೋಹಿತ್ ಶರ್ಮಾ 35ರನ್ ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಔಟಾದರೇ ನಂತರ ಬಂದ ಸೂರ್ಯಕುಮಾರ್ ಯಾದವ್ ಕೇವಲ 3ರನ್ ಗಳಿಸಿ ರವೀಂದ್ರ ಜಡೇಜಾ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು.ಕೈರನ್ ಪೊಲಾರ್ಡ್ ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು ಕೇವಲ 34 ಎಸೆತಗಳಲ್ಲಿ 87ರನ್ ಗಳಿಸಿದ್ದು ಇವರ ಈ ಇನ್ನಿಂಗ್ಸ್‌ನಲ್ಲಿ 8 ಸಿಕ್ಸರ್ ಹಾಗೂ 6 ಬೌಂಡರಿಗಳಿದ್ದವು. ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್ ನಷ್ಟಕ್ಕೆ 219ರನ್ ಗಳಿಸಿತು. ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸಿತು. ಕೊನೆಯ ಎಸೆತದವರೆಗೂ ರೋಮಾಂಚನಕಾರಿಯಾಗಿದ್ದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿಗೆ ಕೈರನ್ ಪೊಲಾರ್ಡ್ ಪ್ರಮುಖ ಪಾತ್ರ ವಹಿಸಿದರು.