alex Certify BIG NEWS: 24 ಗಂಟೆಯಲ್ಲಿ 3,92,488 ಜನರಲ್ಲಿ ಕೊರೊನಾ ಪಾಸಿಟಿವ್ – 3,600ಕ್ಕೂ ಹೆಚ್ಚು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3,92,488 ಜನರಲ್ಲಿ ಕೊರೊನಾ ಪಾಸಿಟಿವ್ – 3,600ಕ್ಕೂ ಹೆಚ್ಚು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,92,488 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3689 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,15,542 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 33,49,644 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,59,92,271 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,07,865 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಆಕ್ಸಿಜನ್ ಹಾಗೂ ರೆಮ್ ಡಿಸಿವಿರ್ ಬಳಕೆ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಡಾ. ರಾಜು

ನಿನ್ನೆ 18,04,954 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 29,01,42,339 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ

ದೇಶದಲ್ಲಿ ಈವರೆಗೆ 15,68,16,031 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...