ಚೆನ್ನೈ: ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಮಿಳುನಾಡಿನ 141 ಕ್ಷೇತ್ರಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಅಧಿಕಾರಕ್ಕೇರುವುದು ಖಚಿತವಾಗಿದೆ.
ಮೇ 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂಕೆ 10 ವರ್ಷಗಳ ನಂತರ ಅಧಿಕಾರಕ್ಕೇರಲಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.