ಬೆಳಗಾವಿ: ರೋಚಕವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಗಳಿಸಿದ್ದಾರೆ.
ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, ಕೊನೆ ಕ್ಷಣದವರೆಗೂ ಕುತೂಹಲ ಮೂಡಿಸಿದ್ದ ಫಲಿತಾಂಶದಲ್ಲಿ ಮಂಗಳಾ ಕೊನೆಗೂ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 10 ಸಾವಿರಕ್ಕಿಂತಲೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ನಂತರದಲ್ಲಿ ಮತಗಳ ಅಂತರ ಕಡಿಮೆಯಾಗಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಗೆ ಸತೀಶ್ ವೀರೋಚಿತ ಸೋಲು ಕಂಡಿದ್ದಾರೆ.