alex Certify ಗಮನಿಸಿ…! ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 5 ರಿಂದ 7 ರವರೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಮೇ 6, 7 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 72 ಗಂಟೆಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...