ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಸಾವು ಕಂಡ ಘಟನೆ ಹರಿಯಾಣದ ಗುರುಗ್ರಾಮದ ಕೀರ್ತಿ ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಮೃತರ ಸಂಬಂಧಿಕರು ಆಸ್ಪತ್ರೆ ಮತ್ತು ವೈದ್ಯರ ಮೇಲೆ ದಾಳಿ ನಡೆಸಿದ್ದಾರೆ.
ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣ ರೋಗಿಗಳಿಗೆ ಆಕ್ಸಿಜನ್ ಸರಬರಾಜು ಸ್ಥಗಿತಗೊಂಡು 8 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರು, ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.