ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸುರೇಶ್ ಕುಮಾರ್ ಅವರ ಸುಳಿವೇ ಇಲ್ಲ. ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದರೂ ಊದಾಸೀನತೆ ಮೆರೆದಿದ್ದಾರೆ.
ಘಟನೆ ಬೆನ್ನಲ್ಲೇ ಮಾತನಾಡಿರುವ ಸಚಿವ ಸುರೇಶ್ ಕುಮಾರ್. ನಿನ್ನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದಾರೆ ಇದು ನಿಜಕ್ಕೂ ದುರಂತವೇ ಸರಿ. ಈ ಬಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರ ಕೈಗೊಳ್ಳುತ್ತೇವೆ ಎಂದರು.
ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ -ಹಣಬಲ, ರಾಜಕೀಯ ಹಿನ್ನಲೆ ಇಲ್ಲದ ಸಾಮಾನ್ಯ ಮಹಿಳೆ ಈಗ ಶಾಸಕಿ
ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾಕ ಕೈಗೊಳ್ಳುತ್ತೇವೆ. ಕೊನೇ ಕ್ಷಣದಲ್ಲಿ ಸೋಂಕಿತರು ವಿಷಮ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದು ದಾಖಲಾಗುತ್ತಿದ್ದಾರೆ, ಇದರಿಂದಾಗಿ ಕೂಡ ಸಾವು ನೋವು ಹೆಚ್ಚುತ್ತಿದೆ ಎಂದು ಹೇಳಿದರು.