ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದ ತಾಯಿಯನ್ನ ಉಳಿಸಿಕೊಳ್ಳಬೇಕು ಅಂತಾ ಇಬ್ಬರು ಪುತ್ರಿಯರು ತಾಯಿಯ ಬಾಯಿಗೆ ಬಾಯಿ ಕೊಟ್ಟು ಉಸಿರು ನೀಡಲು ಯತ್ನಿಸಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆಯೇ ನೆಟ್ಟಿಗರು ಆಸ್ಪತ್ರೆಯಲ್ಲಿ ಆಕ್ಸಿಜನ್ ಅಭಾವ ಹಾಗೂ ಸಿಬ್ಬಂದಿ ಕೊರತೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಈ ವಿಚಾರವಾಗಿ ಮಾತನಾಡಿದ ತುರ್ತು ಸೇವಾ ಅಧಿಕಾರಿ ಅಹ್ತಿಸಮ್ ಅಲಿ, ಮೃತ ಮಹಿಳೆಯು ಉಸಿರಾಟದ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಆಕೆಗೆ ಚಿಕಿತ್ಸೆ ನೀಡುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ಹೇಳಿದ್ರು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಂಭು ಕುಮಾರ್ ಹಾಗೂ ವೈದ್ಯಕೀಯ ಕಾಲೇಜಿನ ಹಿರಿಯ ವೈದ್ಯರು ಸ್ಟ್ರೆಚರ್ ಮೇಲೆ ಮಲಗಿದ್ದ ಮಹಿಳೆಯ ಬಳಿ ಧಾವಿಸಿದ್ದರು.
ಮಹಾರಾಜ್ ಸುಹೇಲ್ದೇವ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಎ.ಕೆ. ಸಾಹ್ನಿ ಈ ಸಂಬಂಧ ಮಾತನಾಡಿದ್ದು, ಭಾನುವಾರ ಮಹಿಳೆಯನ್ನ ತುರ್ತು ಸೇವೆ ವಿಭಾಗಕ್ಕೆ ಕರೆತರಲಾಗಿತ್ತು. ಆಕೆಯನ್ನ ವೈದ್ಯರು ನೋಡುವ ಮೊದಲೇ ಸಾವನ್ನಪ್ಪಿದ್ದರು. ಮೃತ ಮಹಿಳೆಯ ಶವಕ್ಕೆ ಆಕೆಯ ಮಕ್ಕಳು ಉಸಿರು ನೀಡುವ ಯತ್ನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.