ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಕ್ಸಿಜನ್ ಪೂರೈಸಲೂ ಸರ್ಕಾರಕ್ಕೆ ಸಾಧ್ಯವಾಗದ ಸ್ಥಿತಿಬಂದಿದೆ ಇದೆಂತಹ ಸರ್ಕಾರ? ಬಿಜೆಪಿ ನಾಯಕರಿಗೆ ಪ್ರಚಾರ ಮುಖ್ಯವೇ ಹೊರತು ಜನರ ಜೀವಗಳು ಮುಖ್ಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಮನೆಯಲ್ಲಿಯೇ ಆಮ್ಲಜನಕ ವ್ಯವಸ್ಥೆ ಮಾಡಿದ್ದೀರಾ..? ಹಾಗಿದ್ದಲ್ಲಿ ಈ ಅಂಶಗಳನ್ನ ಗಮನದಲ್ಲಿಡಿ
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದೆ ಎಂದು ಹಲವು ದಿನಗಳಿಂದ ಹೇಳಲಾಗುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸುವ ಬದಲು ರಾಜ್ಯ ಸರ್ಕಾರ ಬೇಜವಾಬ್ದಾರಿ ಮೆರೆದಿದೆ. ಮಂತ್ರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಈ ವ್ಯವಸ್ಥೆ ಸರಿ ಹೋಗಲು ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ್ದಾರೆ.