alex Certify ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಗುಡ್ ನ್ಯೂಸ್

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್ ನಂತರ ವಿದ್ಯಾರ್ಥಿವೇತನ”, “ಶುಲ್ಕವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ. 15 ರವರೆಗೆ ವಿಸ್ತರಿಸಲಾಗಿದೆ.

ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಆಹ್ವಾನಿಸಿ ಏ. 30 ಅರ್ಜಿ ಸಲ್ಲಿಕೆಗೆ ಕೊನೆ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಅಲ್ಲದೆ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೇ. 12 ರವರೆಗೂ ರಾಜ್ಯಾದ್ಯಂತ ಕೋವಿಡ್ ಕರ್ಫ್ಯೂ ಘೋಷಣೆಯಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ. 15 ರವರೆಗೆ ವಿಸ್ತರಿಸಲಾಗಿದೆ.

ವೆಬ್‍ಸೈಟ್ www.ssp.postmatric.karnataka.ghov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.  ಇಲಾಖಾ ಸಹಾಯವಾಣಿ: 8050770005 ಅಥವಾ 8050770004, ಇ-ಮೇಲ್ bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ದೂರವಾಣಿ 080-35254757 ಕ್ಕೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...