ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3.57 ಲಕ್ಷ ಹೊಸ ಕೋವಿಡ್ ಕೇಸ್ಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸತತ 13ನೇ ದಿನವು ವಿಶ್ವದ ಎರಡನೇ ಅತೀ ಹೆಚ್ಚು ಕೊರೊನಾ ಕೇಸ್ಗಳನ್ನ ಹೊಂದಿರುವ ಭಾರತ 3 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನ ವರದಿ ಮಾಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,57,229 ಹೊಸ ಕೊರೊನಾ ಕೇಸ್ಗಳು ವರದಿಯಾಗಿದೆ. 24 ಗಂಟೆಗಳಲ್ಲಿ 3449 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಹಾಗೂ 320289 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಎರಡನೆ ಅಲೆಯ ವಿರುದ್ಧ ಹೋರಾಡುತ್ತಿರುವ ಭಾರತದಲ್ಲಿ ಒಟ್ಟು 2,02,82,833 ಕೊರೊನಾ ಪ್ರಕರಣಗಳು ವರದಿಯಾಗಿದೆ.
ಇನ್ನು ಇದರ ಜೊತೆಯಲ್ಲಿ ದೇಶದಲ್ಲಿ ಒಟ್ಟು 1,66,13,292 ಕೊರೊನಾದಿಂದ ಗುಣಮುಖರಾಗಿದ್ದರೆ ಈವರೆಗೆ 2,22,408 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 34,47,133 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ .