ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಲಿನ ಆರ್ಬಟದೊಂದಿಗೆ ಮಳೆಯಾಗಿದ್ದು, ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಹೆಚ್ಚಾಗಿರಲಿದೆ ಎಂದು ಹೇಳಲಾಗಿದೆ.