ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಮೋದಿ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಏನು ಸೂಚನೆ ನೀಡುತ್ತಾರೆ ಅದರಂತೆ ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲರೂ ನೀಡಿದ ಸಲಹೆ ಬಗ್ಗೆ ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಧಾನಿ ನಿರ್ಧಾರ ಕೈಗೊಳ್ಳಲಿದ್ದಾರೆ. ಅವರು ಯಾವ ನಿರ್ದೇಶನ ನೀಡಲಿದ್ದಾರೆ ಎಂಬ ಬಗ್ಗೆ ನಾವೆಲ್ಲರೂ ಕಾಯುತ್ತಿದ್ದೇವೆ. ಸಂಜೆಯ ಬಳಿಕ ಪ್ರಧಾನಿ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಿದರು. ಈ ಮೂಲಕ ಒಂದು ವೇಳೆ ಪ್ರಧಾನಿ ಮೋದಿ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದರೆ ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಜಾರಿಗೆ ಬರಲಿದೆ ಎಂಬುದನ್ನು ಸ್ಪಷ್ಟಪಡಿಸಿದರು.
ಬೆಡ್ ಬ್ಲಾಕಿಂಗ್ ದಂಧೆ ಬಯಲು; ಇದು ಪಾಲು ಹಂಚಿಕೆ ಜಗಳದಿಂದ ಸಿಡಿದ ಕಿಡಿ; ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದರಂತೆ ಎಲ್ಲಾ ಸಚಿವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.