ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ 3ನೇ ಬಾರಿ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೋಲ್ಕತ್ತಾ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಸಂತ್ರಸ್ತ ಯುವತಿಯಿಂದ ಪೊಲೀಸ್ ಆಯುಕ್ತರಿಗೆ ಮತ್ತೊಂದು ಪತ್ರ
ಇಂದು ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಹೊರತಾಗಿ ಬೇರೆ ಯಾವುದೇ ಸಚಿವರು ಪ್ರಮಾಣವಚನ ಸ್ವೀಕರಿಸಿಲ್ಲ. ವಾರಾಂತ್ಯ ಅಥವಾ ಮುಂದಿನ ವಾರ ಸಂಪುಟ ಸಚಿವರು ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.