ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಾಸನ ಜಿಲ್ಲೆಯಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಹಾಸನದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 1400 ಜನರು ಹೋಂ ಐಸೋಲೇಟ್ ಆಗಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಿದೆ. ಹಾಗಾಗಿ ವಾರದಲ್ಲಿ ಮೂರು ದಿನ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ ಎಂದರು.
ಭಾನುವಾರ, ಮಂಗಳವಾರ, ಗುರುವಾರ ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಇರಲಿದೆ. ಎಲ್ಲಾ ಶಾಸಕರು ಕೂಡ ಪಕ್ಷಾತೀತವಾಗಿ ಈ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.