ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆ ಅಲೆಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಂದು ಸುತ್ತಿನ ಸಾಲದ ಕಂತು ಮರುಪಾವತಿ ಮುಂದೂಡಿಕೆಯ ಮೊರಾಟೋರಿಯಂ ಯೋಜನೆ ಪ್ರಕಟಿಸಿದೆ.
ಇದರಿಂದ ಸಂಕಷ್ಟಕ್ಕೆ ಒಳಗಾದ ವ್ಯಕ್ತಿಗತ ಸಾಲಗಾರರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(MSME)ಗಳಿಗೆ ಯೋಜನೆ ಲಾಭ ಸಿಗಲಿದೆ. ಇದೇ ರೀತಿ ವೈದ್ಯಕೀಯ ಕ್ಷೇತ್ರದ ಉತ್ಪಾದಕರಿಗೆ 50 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಪ್ರಕಟಿಸಲಾಗಿದೆ.
RBI ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೊರೊನಾದಿಂದ ತತ್ತರಿಸಿದ ಜನರು, ಸಣ್ಣ ಉದ್ದಿಮೆಗಳಿಗೆ ಅನುಕೂಲಮಾಡಿಕೊಡಲು ಮುಂದಿನ ಎರಡು ವರ್ಷಗಳ ಅವಧಿಗೆ ಸಾಲ ಮರು ಹೊಂದಾಣಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಬಿನ ಈ ನೀತಿಯಿಂದ ಸಾಲ ಮರುಪಾವತಿ ಅವಧಿ ವಿಸ್ತರಣೆ ಅಥವಾ ಬಡ್ಡಿದರದಲ್ಲಿ ಬದಲಾವಣೆಗೆ ಅವಕಾಶವಿದೆ. ಶೇಕಡ 90 ರಷ್ಟು ಸಾಲಗಾರರಿಗೆ ಅನುಕೂಲವಾಗಲಿದೆ. ಈ ಸೌಲಭ್ಯ ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ಘೋಷಣೆ ಮಾಡಿದ ಸಾಲ ಮರುಪಾವತಿ ಸೌಲಭ್ಯ ಪಡೆದವರಿಗೆ ಲಭ್ಯವಾಗುವುದಿಲ್ಲ ಎಂದು ಹೇಳಲಾಗಿದೆ.