ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರ ಮನೆಬಾಗಿಲಿಗೆ ರೇಷನ್ ಪೂರೈಕೆ ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಬಿಪಿಎಲ್ ಕುಟುಂಬದವರ ಮನೆಬಾಗಿಲಿಗೆ ಪಡಿತರ ತಲುಪಿಸಬೇಕೆಂದು ಕೋರಿ ತುಮಕೂರಿನ ವಕೀಲ ರಮೇಶ್ ನಾಯಕ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಹೈಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲಾಗಿದೆ.