alex Certify BIG NEWS: ದೇಶದಲ್ಲಿ ಮುಂದುವರೆದ ಮಹಾಮಾರಿ ಅಟ್ಟಹಾಸ; 24 ಗಂಟೆಯಲ್ಲಿ 4,01,078 ಜನರಲ್ಲಿ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಮುಂದುವರೆದ ಮಹಾಮಾರಿ ಅಟ್ಟಹಾಸ; 24 ಗಂಟೆಯಲ್ಲಿ 4,01,078 ಜನರಲ್ಲಿ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ದಾಖಲೆ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,01,078 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,18,92,676ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,187 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 37,23,446 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,79,30,960 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,18,609 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 16,73,46,544 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...