alex Certify BIG NEWS: ಬ್ಲಾಕ್ ಫಂಗಸ್ ಬಗ್ಗೆ ಜಾಗೃತರಾಗಿರಿ ಎಂದ ಡಿಸಿಎಂ ಅಶ್ವತ್ಥನಾರಾಯಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಲಾಕ್ ಫಂಗಸ್ ಬಗ್ಗೆ ಜಾಗೃತರಾಗಿರಿ ಎಂದ ಡಿಸಿಎಂ ಅಶ್ವತ್ಥನಾರಾಯಣ್

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮುಕರೋ ಮೈಕೋಸಿಸ್ ಫಂಗಸ್ ಎಂಬ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಫಂಗಸ್ ಬಗ್ಗೆ ಜನರು ಹೆಚ್ಚು ಜಾಗೃತರಾಗಿರುವಂತೆ ಡಿಸಿಎಂ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ರೋಗ‌ ನಿರೋಧಕ ಶಕ್ತಿ ಕಡಿಮೆಯಿರುವಂತವರಲ್ಲಿ, ರೋಗಕಾರಕಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಕ್ಷೀಣಿಸುವ ಔಷಧವನ್ನು ತೆಗೆದುಕೊಳ್ಳುತ್ತಿರುವವರ ಮೇಲೆ ಈ ಫಂಗಸ್ ಹೆಚ್ಚು ಪರಿಣಾಮ ಬೀರುತ್ತದೆ. ಹೀಗಾಗಿ ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣ ಕಂಡುಬಂದಲ್ಲಿ ಆರಂಭದಲ್ಲಿಯೇ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

ಕೊರೊನಾ 2ನೇ ಅಲೆಯಲ್ಲಿ ಹೆಚ್ಚಾಗುತ್ತಿದೆ ಬ್ಲಾಕ್ ಫಂಗಸ್; ಏನಿದರ ಲಕ್ಷಣ…? ಇಲ್ಲಿದೆ ಮಾಹಿತಿ

ಕೊರೊನಾ ಸೋಂಕಿತರಲ್ಲಿ ಈ ಬ್ಲ್ಯಾಕ್ ಫಂಗಸ್ ಕಂಡುಬರುತ್ತಿದ್ದು, ಮಹಾರಾಷ್ಟ್ರ, ಗುಜರಾತ್, ದೆಹಲಿಯಲ್ಲಿ ಈ ಪ್ರಕರಣ ಹೆಚ್ಚು ಕಂಡುಬರುತ್ತಿದೆ. ಅಲ್ಲದೇ ಕರ್ನಾಟಕದಲ್ಲಿಯೂ 35 ಪ್ರಕರಣ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...