ಬೆಂಗಳೂರು: ಕಂಡ ಕಂಡವರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೇಕಾಬಿಟ್ಟಿಯಾಗಿ ಲಾಠಿ ಪ್ರಹಾರದ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಲಾಕ್ಡೌನ್ ಗೈಡ್ಲೈನ್ಸ್ ಮೀರಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಒಂದು ವೇಳೆ ಸಾರ್ವಜನಿಕರು ಲಾಕ್ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು, ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆ ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲಿ ಸುರಕ್ಷಿತವಾಗಿರಿ, ಕೊರೋನಾ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.