ಕೊರೊನಾ ಎರಡನೆ ಅಲೆ ಜೋರಾಗಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೇಸ್ಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇದೆ. ದೇಶದಲ್ಲೇ 2ನೇ ಅತಿ ಹೆಚ್ಚು ಪ್ರಕರಣಗಳನ್ನ ವರದಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ.
ಇದೇ ರೀತಿ ಪ್ರಕರಣಗಳು ರಾಜ್ಯದಲ್ಲಿ ಮುಂದುವರಿದ್ರೆ ಮೇ 17ರವರೆಗೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಂಪ್ಯೂಟೇಷನಲ್ ಹಾಗೂ ಡೇಟಾ ಸೈನ್ಸ್ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮುಂದಿನ ವಾರದಿಂದ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಇನ್ನಷ್ಟು ಹೆಚ್ಚಾಗಲಿವೆ ಎಂದು ಅಂದಾಜಿಸಲಾಗಿದೆ. ಮೇ 17ರಿಂದ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಅತ್ಯಧಿಕವಾಗಲಿದೆ. ಜೂನ್ 11ರ ಸುಮಾರಿಗೆ ಬೆಂಗಳೂರಿನಲ್ಲಿ ಸುಮಾರು 14 ಸಾವಿರ ಮಂದಿ ಕೊರೊನಾದಿಂದ ಸಾವಿಗೀಡಾಗಬಹುದು ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಭಾನುವಾರ ಬರೋಬ್ಬರಿ 47, 930 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ 48,401 ಕೇಸ್ಗಳನ್ನ ವರದಿ ಮಾಡಿದ ಮಹಾರಾಷ್ಟ್ರವನ್ನ ಹಿಂದಿಕ್ಕಲು ಕೆಲವೇ ಸಂಖ್ಯೆಗಳು ಬಾಕಿ ಉಳಿದಿದೆ. ಅಲ್ಲದೇ ಕರ್ನಾಟಕ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನ ವರದಿ ಮಾಡ್ತಿರೋ ರಾಜ್ಯಗಳ ಪೈಕಿ 2ನೇ ಸ್ಥಾನವನ್ನ ಪಡೆದುಕೊಂಡಿದೆ.