alex Certify ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಬೆಡ್​, ವೈದ್ಯಕೀಯ ಆಮ್ಲಜನಕ ಹಾಗೂ ವೆಂಟಿಲೇಟರ್​ ಸಮಸ್ಯೆ ಮಿತಿಮೀರಿದೆ. ಆಕ್ಸಿಜನ್​ ಸಿಗದೇ ಜನತೆ ಸಾಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಚಿಕಿತ್ಸೆಯಲ್ಲಿ ಪ್ರಮುಖವಾಗಿ ಬಳಕೆಯಾಗಲ್ಪಡುವ ರೆಮಿಡಿಸಿವರ್​ ಕಾಳಸಂತೆಯಲ್ಲಿ 15 ರಿಂದ 30 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಸರ್ಕಾರವೇ ರೆಮಿಡಿಸಿವರ್​​ ವಿತರಣೆ ಜವಾಬ್ದಾರಿ ಹೊತ್ತಿರುವಾಗ ಈ ಚುಚ್ಚುಮದ್ದು ಕಾಳಸಂತೆಗೆ ಹೋಗೋಕೆ ಹೇಗೆ ಸಾಧ್ಯ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದೇ ವೇಳೆ ಸಚಿವ ಸುಧಾಕರ್​ ವಿರುದ್ಧವೂ ಕೆಂಡಕಾರಿದ ರಾಮಲಿಂಗಾರೆಡ್ಡಿ, ಸುಧಾಕರ್​ ರಾಜ್ಯದ ಮಂತ್ರಿಯೋ ಇಲ್ಲ ಕೇವಲ ಚಿಕ್ಕಬಳ್ಳಾಪುರದ ಮಂತ್ರಿಯೋ ಎಂಬುದು ಅರ್ಥವಾಗುತ್ತಿಲ್ಲ. ಚಿಕ್ಕ ಬಳ್ಳಾಪುರದಲ್ಲಿ ಅತೀ ಹೆಚ್ಚು ಬೆಡ್​ ವ್ಯವಸ್ಥೆ ಮಾಡಿ ಬೆಂಗಳೂರಿನಲ್ಲಿ ಕಡಿಮೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಇನ್ನು 18 ರಿಂದ 44 ವರ್ಷದವರಿಗೆ ಕೊರೊನಾ ಲಸಿಕೆ ನೀಡುವ ವಿಚಾರದಲ್ಲಂತೂ ರಾಜ್ಯ ಸರ್ಕಾರಕ್ಕೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಅವರು ಕಿಡಿಕಾರಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...