alex Certify ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡದ ‘ಆಯುಷ್ಮಾನ್ ಭಾರತ್’ ಯಾವ ಪುರುಷಾರ್ಥಕ್ಕೆ…? ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡದ ‘ಆಯುಷ್ಮಾನ್ ಭಾರತ್’ ಯಾವ ಪುರುಷಾರ್ಥಕ್ಕೆ…? ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲ ಎಂದಾದರೆ ಈ ಯೋಜನೆ ಇರುವುದು ಮತ್ತಿನ್ಯಾವ ಪುರುಷಾರ್ಥಕ್ಕೆ?
ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ವ್ಯಾಕ್ಸಿನ್ ಲಭ್ಯವಿಲ್ಲ; ಎಲ್ಲಾ ರಾಜ್ಯದಲ್ಲೂ ಸಮಸ್ಯೆ ಎದುರಾಗಿದೆ; ಅಸಹಾಯಕತೆ ತೋಡಿಕೊಂಡ ಮುಖ್ಯಕಾರ್ಯದರ್ಶಿ

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿರ್ಬಂಧಿಸಿದೆ. 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ಸಂಕಷ್ಟದ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ತೋರಬೇಕು. ನಿರ್ಬಂಧ ಸಡಿಲಗೊಳಿಸಿ ತಕ್ಷಣ ಆದೇಶ ಹೊರಡಿಸಿ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...