ಕೊರೊನಾ ಕಾರಣಕ್ಕೆ ಐಪಿಎಲ್ ನ 14 ನೇ ಋತುವಿನ ಪಂದ್ಯಗಳನ್ನು ಮುಂದೂಡಲಾಗಿದೆ. 29 ಪಂದ್ಯಗಳ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ಬಿಸಿಸಿಐ ಯೋಜಿಸುತ್ತಿದೆ. ಆದರೆ ಉಳಿದ ಐಪಿಎಲ್ ಪಂದ್ಯಗಳನ್ನು ಸೆಪ್ಟೆಂಬರ್‌ನಲ್ಲಿ ಆಯೋಜಿಸುವುದು ಬಿಸಿಸಿಐಗೆ ಸುಲಭವಲ್ಲ. ಐಪಿಎಲ್ 2021 ರ ಉಳಿದ ಪಂದ್ಯಗಳನ್ನಾಡಲು ಇಂಗ್ಲೆಂಡ್ ಕ್ರಿಕೆಟಿಗರು ಲಭ್ಯವಿರುವುದಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ನ್ಯೂಜಿಲೆಂಡ್‌ನ ಆಟಗಾರರು ಸಹ ತಂಡಕ್ಕೆ ಲಭ್ಯರಾಗುವ ಸಾಧ್ಯತೆ ಕಡಿಮೆಯಿದೆ.
ಸೆಪ್ಟೆಂಬರ್ ನಲ್ಲಿ ಯುಎಇಯಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಮಧ್ಯೆ ಪಂದ್ಯ ನಡೆಯಲಿದೆ. ಈ ಸರಣಿ ಕಾರಣದಿಂದಾಗಿ ನ್ಯೂಜಿಲ್ಯಾಂಡ್ ನ ಆಟಗಾರರು ಐಪಿಎಲ್ ಗೆ ಅಲಭ್ಯರಾಗಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್, ಪಾಕಿಸ್ತಾನ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಪಂದ್ಯವನ್ನು ಮುಂದೂಡಲು ಸಾಧ್ಯವಿಲ್ಲ.
ಇಂಗ್ಲೆಂಡ್ ತಂಡ ಸೆಪ್ಟೆಂಬರ್ ನಲ್ಲಿ ಬಾಂಗ್ಲಾ ವಿರುದ್ಧ ನಡೆಯುವ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಬಾಂಗ್ಲಾದೇಶ ವಿರುದ್ಧ 3 ಏಕದಿನ ಮತ್ತು 3 ಟಿ 20 ಪಂದ್ಯ ನಡೆಯಲಿದೆ. ಐಪಿಎಲ್ 2021 ರ ಎರಡನೇ ಹಂತಕ್ಕೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ನ ಆಟಗಾರರಲ್ಲದೆ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಆಟಗಾರರು ಸಹ ಲಭ್ಯವಿರುವುದಿಲ್ಲ.