ಬೆಂಗಳೂರು: ಸದ್ಯಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದಿಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಾಗುತ್ತದೆ.
ಎರಡನೇ ಡೋಸ್ ಡಾನ್ಸ್ ಮುಗಿದ ಬಳಿಕ ಲಸಿಕೆ ನೀಡಿಕೆ ದಿನಾಂಕವನ್ನು ಘೋಷಣೆ ಮಾಡಲಾಗುವುದು. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬಗ್ಗೆ ನಂತರದಲ್ಲಿ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಲಸಿಕೆ ಕೊರತೆ ಕಾರಣ ರಾಜ್ಯದಲ್ಲಿ ಲಸಿಕಾ ಕೇಂದ್ರಗಳಿಗೆ ಜನ ಮುಗಿಬೀಳುತ್ತಿದ್ದಾರೆ. 45 ವರ್ಷ ಮೇಲ್ಪಟ್ಟವರು ಸೇರಿದಂತೆ ಇನ್ನೂ ಅನೇಕರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿಲ್ಲ. ಎರಡನೇ ಡೋಸ್ ಕೂಡ ಸಿಗುತ್ತಿಲ್ಲ. ಸದ್ಯಕ್ಕೆ 18 ವರ್ಷದವರಿಗೂ ಸದ್ಯಕ್ಕೆ ಲಸಿಕೆ ಇಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಿದ್ದು, ನಂತರದಲ್ಲಿ ಉಳಿದವರಿಗೆ ಲಸಿಕೆ ನೀಡಲಾಗುತ್ತದೆ ಎನ್ನಲಾಗಿದೆ.